Home ಕರಾವಳಿ ಭಾರೀ ಮಳೆ | ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ, ಮಕ್ಕಳು ಬಂದಿದ್ದರೆ ತರಗತಿ...

ಭಾರೀ ಮಳೆ | ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ, ಮಕ್ಕಳು ಬಂದಿದ್ದರೆ ತರಗತಿ ಆರಂಭಿಸಿ: ದ.ಕ. ಜಿಲ್ಲಾಧಿಕಾರಿ

ತಾಲೂಕುಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ತೀರ್ಮಾನ

ಮಂಗಳೂರು: ಮಂಜಾನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಶಾಲೆಗೆ ಬರಲು ತೊಂದರೆಯಾದಲ್ಲಿ ಅಂತಹ ಕಡೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.

ಈಗಾಗಾಲೇ ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಪಾಠ ಮುಂದುವರೆಸಿ, ಅಲ್ಲದೆ ಶಿಕ್ಷಕರು ಮಕ್ಕಳ ಬಗ್ಗೆ ಮುಂಜಾಗ್ರತೆ ವಹಿಸಿ ಎಂದು ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ರಜೆ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಆದೇಶ ಹೊರಡಿಸಿದ್ದಾರೆ.

ತಾಲೂಕುಗಳಲ್ಲಿ ತಹಶೀಲ್ದಾರ್ ಅವರು ಪರಿಸ್ಥಿತಿಯನ್ನು ಅವಲೋಕಿಸಿ ತೀರ್ಮಾನ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಇಂದು ಮುಂಜಾನೆಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ನಿತ್ಯ ಕೆಲಸ ಕಾರ್ಯಗಳಿಗೆ ಹೊರಡುವ ಜನರು ಬೆಳಗ್ಗೆಯೇ ಕಿರಿಕಿರಿ ಅನುಭವಿಸಿದ್ದಾರೆ. ಮತ್ತೊಂದೆಡೆ ವಾಹನ ಸವಾರರು ಕೂಡ ಮಳೆಯ ಕಾರಣದಿಂದ ಪರದಾಟ ಅನುಭವಿಸಿದ್ದಾರೆ.

Join Whatsapp
Exit mobile version