ಮಂಗಳೂರು: ಗಣೇಶೋತ್ಸವ ಆಚರಣೆ ವೇಳೆ ಸರಕಾರಿ ಮಾರ್ಗಸೂಚಿ ಕಟ್ಟುನಿಟ್ಟಾಗಿ ಜಾರಿ – ಕಮೀಷನರ್

Prasthutha|

ಮಂಗಳೂರು: ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ವೇಳೆ ಸರಕಾರಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಸರಕಾರದ ಮಾರ್ಗಸೂಚಿಯಂತೆ ಯಾವುದೇ ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳಿಗೆ ಅವಕಾಶವಿರುವುದಿಲ್ಲ. ಅಲ್ಲದೇ, ಸಾರ್ವಜನಿಕ ಗಣೇಶೋತ್ಸವ ಆಚರಣೆ ಸಂಘಟಿಸುವ ಆಯೋಜಕರು ಕೋವಿಡ್-19 ಲಸಿಕೆ ಪಡೆದಿರುವ ಪ್ರಮಾಣ ಪತ್ರ ಹಾಗೂ ಕಡ್ಡಾಯವಾಗಿ ನೆಗೆಟಿವ್ ರಿಪೋರ್ಟ್ ಹೊಂದಿರುವುದು ಕಡ್ಡಾಯ ಎಂದು ತಿಳಿಸಿದ್ದಾರೆ.

- Advertisement -

ಇನ್ನು ಸಾರ್ವಜನಿಕ ಗಣೇಶೋತ್ಸವ ಆಚರಣೆಯಲ್ಲಿ ಭಾಗವಹಿಸುವ ಭಕ್ತರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, 6 ಅಡಿಗಳ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಜೊತೆಗೆ, ಸರಕಾರ ಹಾಗು ಸ್ಥಳೀಯಾಡಳಿತ ನೀಡುವ ಮಾರ್ಗಸೂಚಿಗಳನ್ನ ಪಾಲಿಸಬೇಕು ಎಂದರು.

ನಗರದ 157 ಕಡೆಗಳಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ನಡೆಯಲಿದ್ದು, ಅದರಲ್ಲಿ 90 ರಷ್ಟು ಗಣೇಶ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಗಣೇಶೋತ್ಸವ ಭದ್ರತೆಗಾಗಿ ಮೂವರು ಡಿಸಿಪಿ, ಐವರು ಎಸಿಪಿ ಸಹಿತ ಸಿಎಆರ್ ಹಾಗೂ ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗುವುದು ಎಂದು ಪೊಲೀಸ್ ಕಮೀಷನರ್ ಮಾಹಿತಿಯನ್ನು ನೀಡಿದ್ದಾರೆ.

- Advertisement -