Home ಕರಾವಳಿ ಮಂಗಳೂರು:ತೀವ್ರ ಜ್ವರದಿಂದ ಕಾಲೇಜು ವಿದ್ಯಾರ್ಥಿನಿ ಮೃತ್ಯು

ಮಂಗಳೂರು:ತೀವ್ರ ಜ್ವರದಿಂದ ಕಾಲೇಜು ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳ: ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ.


ವಿಟ್ಲ ಅಮ್ಟಾಡಿ ನಿವಾಸಿ ಕವಿತಾ (20 ) ಮೃತ ವಿದ್ಯಾರ್ಥಿನಿ. ಸಿದ್ದಕಟ್ಟೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿನಿಯಾಗಿದ್ದ ಕವಿತಾ ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಳು.

ವಿಪರೀತ ಜ್ವರದ ಕಾರಣ ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕವಿತಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದು ಬಂದಿದೆ.

Join Whatsapp
Exit mobile version