ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಕಂಡಕ್ಟರ್ ಮೃತಪಟ್ಟಿರುವ ಘಟನೆ ನಂತೂರು ವೃತ್ತ ಬಳಿ ನಡೆದಿದೆ.
ಬಸ್ಸಿನ ಎದುರು ಬಾಗಿಲ ಬಳಿ ನಿಂತಿದ್ದ ಈರಯ್ಯ( 23) ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳವಾರ ಮಧ್ಯಾಹ್ನ ಸಿಟಿ ಬಸ್ ಪದುವದಿಂದ ಶಿವಭಾಗ್ ಕಡೆ ಹೋಗುವ ವೇಳೆ ನಂತೂರು ವೃತ್ತ ಬಳಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.