Home ಟಾಪ್ ಸುದ್ದಿಗಳು ಮಂಗಳೂರು ಕುಕ್ಕರ್ ಬ್ಲಾಸ್ಟ್ ಗು, ಬೆಂಗಳೂರು ಕೆಫೆ ಸ್ಫೋಟಕ್ಕೂ ಸಾಮ್ಯತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮಂಗಳೂರು ಕುಕ್ಕರ್ ಬ್ಲಾಸ್ಟ್ ಗು, ಬೆಂಗಳೂರು ಕೆಫೆ ಸ್ಫೋಟಕ್ಕೂ ಸಾಮ್ಯತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಗು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್ ಗೂ ಸಾಮ್ಯತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಪಿ ಮಾಸ್ಕ್, ಟೋಪಿ ಹಾಕಿಕೊಂಡು ಬಂದು ಸ್ಫೋಟಿಸಿದ್ದಾನೆ. ಆರೋಪಿಯು ಬಸ್ ನಿಂದ ಇಳಿದು ಹೋಟೆಲ್ ಗೆ ಹೋಗಿದ್ದಾನೆ. ಆರೋಪಿ ಬಸ್ ನಿಂದ ಇಳಿದು ಹೋಗಿರುವ ದೃಶ್ಯಾವಳಿಗಳು ಪತ್ತೆಯಾಗಿವೆ. ಆರೋಪಿ ಕಪ್ಪು ಬಣ್ಣದ ಮಾಸ್ಕ್ ಹಾಕಿಕೊಂಡು ಬಂದಿದ್ದನು. ಆರೋಪಿ ಟೋಪಿ ಹಾಕಿಕೊಂಡು ಬಂದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೋಟೆಲ್ ನಲ್ಲಿ ತಿಂಡಿಯ ಟೋಕನ್ ತೆಗೆದುಕೊಂಡಿದ್ದಾನೆ. ನಂತರ ಹೋಟೆಲ್ ನಲ್ಲಿ ಕುಳಿತು ಟೈಮರ್ ಫಿಕ್ಸ್ ಮಾಡಿದ್ದಾನೆ. ಟೈಮರ್ ಫಿಕ್ಸ್ ಮಾಡಿ ಇಟ್ಟು ಹೋಟೆಲ್ ನಿಂದ ಹೊರಹೋಗಿದ್ದಾನೆ. ಬಳಿಕ ಬ್ಲಾಸ್ಟ್ ಆಗಿದೆ ಎಂದರು.


ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಇದು ಓರ್ವ ವ್ಯಕ್ತಿಯ ಕೃತ್ಯವಾ ಅಥವಾ ಸಂಘಟನೆಯ ಕೃತ್ಯವಾ ಗೊತ್ತಿಲ್ಲ. ಭಯೋತ್ಪಾದಕ ಕೃತ್ಯನಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದರು.

Join Whatsapp
Exit mobile version