ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಆರೋಪಿ ಶಾರೀಕ್’ನನ್ನು ಬೆಂಗಳೂರಿಗೆ ಕರೆದೊಯ್ದ NIA

Prasthutha|

ಮಂಗಳೂರು: ನಗರದ ನಾಗುರಿ ಬಳಿ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರೀಕ್’ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -


ಶಾರೀಕ್ ಬಹುತೇಕ ಗುಣಮುಖನಾದ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಯಿಂದ ಸ್ಥಳಾಂತರಿಸಲಾಗಿದ್ದು, ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳ ತಂಡ ಇಂದು ಮುಂಜಾನೆ 4ರ ವೇಳೆಗೆ ಬೆಂಗಳೂರಿಗೆ ಕರೆತಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದೆ.


ಸುಟ್ಟ ಗಾಯಗಳಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾರೀಕ್ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ಸೆಂಟರ್’ನಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದು ಅಲ್ಲಿಂದ ಎನ್’ಐಎ ಕಚೇರಿಗೆ ಕರೆತಂದು ಶಾರೀಕ್’ನ ವಿಚಾರಣೆಯನ್ನು ಎನ್’ಐಎ ಅಧಿಕಾರಿಗಳು ಮುಂದುವರಿಸಲಿದ್ದಾರೆ ಎಂದು ತಿಳಿದುಬಂದಿದೆ.



Join Whatsapp