ಮಂಗಳೂರು: ಮಂಗಳೂರು ದಸರಾ ಸೆಪ್ಟೆಂಬರ್ 26 ರಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 16 ರವರೆಗೆ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕಿನಾದ್ಯಂತ ಹೆಚ್ಚುವರಿ ರಜೆ ನೀಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಶಾಸಕ ವೇದವ್ಯಾಸ್ ಕಾಮತ್, ಈ ಬಗ್ಗೆ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದು, ಶಾಲಾ ಮಕ್ಕಳ ದಸರಾ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡಲು ಆದೇಶ ಬಂದಿದೆ ಮತ್ತು ಮಂಗಳೂರು ದಸರಾವನ್ನು ಗಮನದಲ್ಲಿಟ್ಟುಕೊಂಡು ನಾಲ್ಕು ದಿನಗಳ ಹೆಚ್ಚುವರಿ ರಜೆಯನ್ನು ನೀಡಲಾಗಿದೆ.
ಪ್ರತಿಯೊಬ್ಬರೂ ಗಾಂಧಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ಸುತ್ತೋಲೆಯಲ್ಲಿ ನಿರ್ದೇಶಿಸಲಾಗಿದ್ದು, ಈ ಆದೇಶವು ಮಂಗಳೂರು ತಾಲ್ಲೂಕಿಗೆ ಮಾತ್ರ ಸೀಮಿತವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.