ಮಂಗಳೂರು: ಕೋಮು ಗಲಭೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ಐವರು ಬಜರಂಗದಳ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ.
ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಬಜರಂಗದಳ ಕಾರ್ಯಕರ್ತರಾದ ಲತೇಶ್ ಗುಂಡ್ಯ, ಪ್ರಜ್ವಲ್, ನಿಶಾಂತ್, ಪ್ರದೀಪ್ ಮತ್ತು ದಿನೇಶ್ ಅವರಿಗೆ ನೋಟಿ ಜಾರಿ ಮಾಡಿದ ಪೊಲೀಸರು, ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನವೆಂಬರ್ 22 ರಂದು ಪುತ್ತೂರು ಸಹಾಯಕ ಆಯುಕ್ತರೆದುರು ಹಾಜರಾಗಲು ಸೂಚನೆ ನೀಡಿದ್ದಾರೆ.
ಕರ್ನಾಟಕ ಪೊಲೀಸ್ ಅಧಿನಿಯಮ 1953ರ ಕಲಂ 55ರ ಅಡಿ ಗಡೀಪಾರು ನೋಟೀಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಹಾಜರಾದ ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಮಾಡಿ ಆದೇಶ ಹೊರಡಿಸುವ ಸಾಧ್ಯತೆ ಇದೆ.