ಮಂಗಳೂರು ಧಕ್ಕೆ ಮೀನು ಮಾರಾಟ – ಕಮಿಷನ್ ಏಜೆಂಟ್ ಸಂಘದ ಅಧ್ಯಕ್ಷ ಸಿ.ಎಂ. ಮುಸ್ತಾಫಾ ನಿಧನ

Prasthutha|

ಮಂಗಳೂರು: ಮಂಗಳೂರು ಧಕ್ಕೆ ಮೀನು ಮಾರಾಟ ಮತ್ತು ಕಮಿಷನ್ ಏಜೆಂಟ್ ಸಂಘದ ಅಧ್ಯಕ್ಷ ಸಿ.ಎಂ. ಮುಸ್ತಾಫಾ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

- Advertisement -


ನಗರದ ಬಂದರು ಅನ್ಸಾರಿ ರಸ್ತೆಯ ನಿವಾಸಿ, ಸಿಎಂ ಮುಸ್ತಫಾ (62) ಇಂದು ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


ಹೃದಯ ಸಂಬಂಧಿ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

- Advertisement -


ದಿ ಮುಸ್ಲಿಂ ಸೆಂಟ್ರಲ್ ಕಮಿಟಿ, ಮುಸ್ಲಿಂ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಯಾಗಿದ್ದ ಅವರು ಮಂಗಳೂರು ಧಕ್ಕೆ ಮೀನು ಮಾರಾಟ ಮತ್ತು ಕಮಿಷನ್ ಏಜೆಂಟ್ ಸಂಘದ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರು,ಒಬ್ಬ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.