Home ಕರಾವಳಿ ಮಂಗಳೂರು: ಪಶ್ಚಿಮ ವಲಯ ಡಿಐಜಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಚಂದ್ರಗುಪ್ತ

ಮಂಗಳೂರು: ಪಶ್ಚಿಮ ವಲಯ ಡಿಐಜಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಚಂದ್ರಗುಪ್ತ

ಮಂಗಳೂರು: ಪಶ್ಚಿಮ ವಲಯ ಡಿಐಜಿಯಾಗಿ ಡಾ. ಚಂದ್ರಗುಪ್ತ ಅಧಿಕಾರ ಸ್ವೀಕರಿಸಿದರು.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕಾರವಾರ ಜಿಲ್ಲಾ ವ್ಯಾಪ್ತಿಯ ಪಶ್ಚಿಮ ವಲಯ ಡಿಐಜಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಚಂದ್ರಗುಪ್ತ ಅವರು 2006ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.

ಎರಡು ವರ್ಷಗಳಿಂದ‌ ಪಶ್ಚಿಮ ವಲಯ ಐಜಿಪಿಯಾಗಿದ್ದ ದೇವಜ್ಯೋತಿ ರೇಯವರು ಡಾ.ಚಂದ್ರಗುಪ್ತ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ. ದೇವಜ್ಯೋತಿ ರೇ ಅವರು ಬೆಂಗಳೂರಿನ‌ ಮಾನವ ಹಕ್ಕು ಘಟಕಕ್ಕೆ ವರ್ಗಾವಣೆಗೊಂಡಿದ್ದಾರೆ.

ಡಾ. ಚಂದ್ರಗುಪ್ತ ಅವರು ಈ ಹಿಂದೆ ಪುತ್ತೂರು ಎಎಸ್ಪಿಯಾಗಿದ್ದರು. ಆ ಸಂದರ್ಭದಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸರಣಿ ಹಂತಕ ಸೈನೆಡ್ ಮೋಹನ್ ಪ್ರಕರಣದ ತನಿಖಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ವಿವಿಧೆಡೆ ಕಾರ್ಯ ನಿರ್ವಹಿಸಿದ್ದ ಚಂದ್ರಗುಪ್ತರವರು ಮೈಸೂರು ಪೊಲೀಸ್ ಕಮೀಷನರ್ ಆಗಿದ್ದರು. ಚಂದ್ರಗುಪ್ತರವರು ನ.19ರಂದು ಮಂಗಳೂರು ನಾಗುರಿ ಸಮೀಪ ರಿಕ್ಷಾದಲ್ಲಿ ನಡೆದ ಬಾಂಬ್ ಸ್ಫೋಟದ ತನಿಖೆಯನ್ನು ಚುರುಕುಗೊಳಿಸಿದ್ದಾರೆ‌.

Join Whatsapp
Exit mobile version