ಮಂಗಳೂರು: ಡಿವೈಎಫ್ ಐನಿಂದ ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನ

Prasthutha|

‘ಪೊಲೀಸರು ಆರ್ ಎಸ್ ಎಸ್ ಮತ್ತು ಶಾಸಕರ ಅಣತಿಯಂತೆ ವರ್ತಿಸುತ್ತಿದ್ದಾರೆ’: ಡಿವೈಎಫ್ ಐ

- Advertisement -

ಉಳ್ಳಾಲ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಡಿವೈಎಫ್ ಐನವರ ಮೇಲೆ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಆರೋಪಿಸಿ ಡಿವೈಎಫ್ ಐನವರು ಮಂಗಳವಾರ ಉಳ್ಳಾಲ ಪ್ರತಿಭಟನೆ ನಡೆಸಿದರು.


ಮಾಸ್ತಿಕಟ್ಟೆಯಿಂದ ಉಳ್ಳಾಲ ಪೊಲೀಸ್ ಠಾಣೆವರೆಗೆ ಮೆರವಣಿಗೆ ನಡೆಸಿ, ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

- Advertisement -


‘ಪೊಲೀಸರು ಆರ್ಎಸ್ಎಸ್ ಮತ್ತು ಶಾಸಕರ ಅಣತಿಯಂತೆ ವರ್ತಿಸುತ್ತಿದ್ದಾರೆ’ ಎಂದು ಘೋಷಣೆ ಕೂಗಿದರು.


ಸಂಘಪರಿವಾರದ ಜಗದೀಶ್ ಕಾರಂತ್, ಶರಣ್ ಪಂಪ್ವೆಲ್ , ಪ್ರಭಾಕರ್ ಭಟ್ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಿದರೂ, ದ್ವೇಷ ಭಾಷಣ ಮಾಡಿದರೂ ಸೂಕ್ತ ಕ್ರಮಗಳನ್ನು ಕೈಗೊಳ್ಳದ ಪೊಲೀಸರು ಬೀಡಿ ಕಾರ್ಮಿಕರ, ಬೀದಿಬದಿ ವ್ಯಾಪಾರಸ್ಥರ, ರೈತರ ಪರ ನ್ಯಾಯಕ್ಕಾಗಿ ಹೋರಾಟ ಮಾಡುವ ಡಿವೈಎಫ್ಐ ಮುಖಂಡರ ವಿರುದ್ಧ ಪ್ರಕರಣ ದಾಖಲಿಸುವ ಉದ್ದೇಶ ಏನು ಎಂದು ಪ್ರಶ್ನಿಸಿದರು.



Join Whatsapp