ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ

Prasthutha|

ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರು ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ನಡೆದಿದೆ.

- Advertisement -


ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು.


ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಅವರು ಇಂದು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.



Join Whatsapp