Home ಕರಾವಳಿ ಮಂಗಳೂರು: ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಮಂಗಳೂರು: ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಮಂಗಳೂರು: ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿದೆ.


ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮುಹಮ್ಮದ್ ನಶತ್ (21) ಮೃತ ವಿದ್ಯಾರ್ಥಿ.


ಯುವಕ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿದ್ದು ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.


ಮಂಗಳೂರು ಸಂಚಾರಿ ದಕ್ಷಿಣ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ.

Join Whatsapp
Exit mobile version