ಮಂಗಳೂರು: ಮಗಳನ್ನೇ ಅತ್ಯಾಚಾರಗೈದ ತಂದೆ; 20 ವರ್ಷ ಕಠಿಣ ಸಜೆ

Prasthutha|

ಮಂಗಳೂರು:  ವಯೋವೃದ್ಧ ತಂದೆಯೇ ತನ್ನ ಸ್ವಂತ ಮಗಳ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಸಾಬೀತಾಗಿದ್ದು, ಅಪರಾಧಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 20 ವರ್ಷ ಕಠಿಣ ಸಜೆ ಮತ್ತು ₹ 25 ಸಾವಿರ ದಂಡ ವಿಧಿಸಿದೆ.

- Advertisement -

ಸಾಕ್ಷ್ಯಧಾರಗಳನ್ನು ಪರಿಗಣಿಸಿ ನ್ಯಾಯಾಧೀಶರಾದ ಕೆ. ಎಂ. ರಾಧಕೃಷ್ಣ ಅವರು ಈ ಆದೇಶ ಪ್ರಕಟಿಸಿದ್ದಾರೆ.

2020ನೇ ಮಾರ್ಚ್ ತಿಂಗಳಿನಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 70 ವರ್ಷದ ತಂದೆಯೊಬ್ಬ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಪ್ರಕರಣ ನಡೆದಿತ್ತು.

- Advertisement -

ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ಪ್ರಕರಣದ ತನಿಖೆ ನಡೆಸಿ, ಆರೋಪಿಯ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಸರ್ಕಾರಿ ವಕೀಲ ವೆಂಕಟರಮಣ ಸ್ವಾಮಿ ಸರ್ಕಾರದ ಪರವಾಗಿ ವಾದಿಸಿದ್ದರು.

Join Whatsapp