ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಗೈಯಲ್ಪಟ್ಟ ಫಾಝಿಲ್ ಮಂಗಳಪೇಟೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ 4 ಮಂದಿ ಸಂಘಪರಿವಾರದ ಕಾರ್ಯಕರ್ತರನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಘಪರಿವಾರದ ಕಾರ್ಯಕರ್ತರ ಮನೆಯವರು, ವಿಚಾರಣೆ ಹಿನ್ನೆಲೆಯಲ್ಲಿ ನಿನ್ನೆ ತಡ ರಾತ್ರಿ ಪೋಲೀಸರು ವಿಚಾರಣೆಗೆ ಎಂದು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ. ನಮ್ಮ ಮಕ್ಕಳು ಭಜರಂಗದಳದಲ್ಲಿ ಸಕ್ರೀಯರಾಗಿದ್ದರೂ ಈ ಕೊಲೆ ನಮ್ಮ ಮಕ್ಕಳು ಮಾಡಿಲ್ಲ ಎಂದು ತಿಳಿಸಿದ್ದಾರೆ.
ಈ ಹತ್ಯೆಯ ಹಿಂದೆ ಸಂಘಪರಿವಾರದ ನೇರ ಕೈವಾಡ ಶಂಕೆ ವ್ಯಕ್ತವಾಗುತ್ತಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿಗಳು ಹೊರಬೀಳಲಿದೆ ಎಂದು ತಿಳಿದು ಬಂದಿದೆ.