ಪಾಕಿಸ್ತಾನ ಪರ ಘೋಷಣೆ ಕೂಗಿದ್ದರೆ ಕಾನೂನು ಕ್ರಮ ಆಗುತ್ತೆ: ಡಾ.ಜಿ.ಪರಮೇಶ್ವರ್

Prasthutha|

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ. ವಿಡಿಯೋದಲ್ಲಿ ಕೆಲವರು ನಾಸಿರ್ ಸಾಬ್ ಅಂತಾರೆ, ಕೆಲವರು ಪಾಕಿಸ್ತಾನ ಅಂತಾರೆ. ವೈಜ್ಞಾನಿಕವಾಗಿ ಸತ್ಯಾಸತ್ಯತೆ ತಿಳಿಯಲು ವಿಧಿ ವಿಜ್ಞಾನ ಪ್ರಯೋಗಾಲಯಗೆ ವಿಡಿಯೋ ಕಳುಹಿಸುತ್ತಿದ್ದೇವೆ. ಒಂದು ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರೇ ಕಾನೂನು ಕ್ರಮ ಆಗೇ ಆಗುತ್ತೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

- Advertisement -


ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಯಾರು ಮೊದಲು ಪ್ರಸಾರ ಮಾಡಿದ್ದಾರೆ ಅವರಿಂದ ವಿಡಿಯೋ ಪಡೆದು ತನಿಖೆ ಮಾಡುತ್ತೇವೆ. ಎಫ್ ಎಸ್ ಎಲ್ ಗೆ ಕಳುಹಿಸಿರುವ ಪ್ರಕಿಯೆಗಳು ಆರಂಭವಾಗಿವೆ. ಪೊಲೀಸರು ಮಾಡಿರುವ ವಿಡಿಯೋ ಚಿತ್ರೀಕರಣ, ವಿಧಾನಸೌಧ ಸಿಸಿ ಕ್ಯಾಮರಾ ಎಲ್ಲವನ್ನು ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದರು.



Join Whatsapp