Home ಕರಾವಳಿ ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕಿ ಸಾವು !

ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕಿ ಸಾವು !

ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದಿದೆ.


ಕಲ್ಲಡ್ಕ ಬಳಿಯ ಹನುಮಾನ್ ನಗರ ನಿವಾಸಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿ ಎಂದು ತಿಳಿದು ಬಂದಿದೆ. ಆರಾಧ್ಯ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದಳು. ಬಾಲಕಿ ಸಾವಿನ ಹಿನ್ನೆಲೆ ಇಂದು ಶಾಲೆಗೆ ರಜೆ ಕೊಡಲಾಗಿದೆ.

ಕಳೆದ ಒಂದು ವಾರದಿಂದ ಬಾಲಕಿ ತೀವ್ರ ಜ್ವರದಿಂದ ಬಳಲುತ್ತಿದ್ದು ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಹೆಚ್ಚಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಮೃತಪಟ್ಟಿದ್ದಾಳೆ.

Join Whatsapp
Exit mobile version