ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನ ವಶ

Prasthutha|

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನವನ್ನು  ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

- Advertisement -

ದುಬೈನಿಂದ ಬಂದ ನಾಲ್ವರು ಪ್ರಯಾಣಿಕರು ತಮ್ಮ ಚೆಕ್-ಇನ್ ಟ್ರಾಲಿ ಚೀಲಗಳಲ್ಲಿ 2,01,37,150 ರೂ.ಗಳ ಮೌಲ್ಯದ ಒಟ್ಟು 3.895 ಕೆ.ಜಿ ತೂಕದ 24 ಕ್ಯಾರೆಟ್ ಶುದ್ಧತೆಯ ರೋಡಿಯಂ ಲೇಪಿತ ಚಿನ್ನದ ಪಟ್ಟಿಗಳನ್ನು  ಮರೆಮಾಚಿ ಅಕ್ರಮವಾಗಿ ಸಾಗಿಸಲು ಪ್ರಯತ್ನಿಸಿದ್ದರು. ಇದನ್ನು ಪತ್ತೆ ಹಚ್ಚಿದ ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡಿದ್ದು, ಪ್ರಯಾಣಿಕರನ್ನು ವಿಚಾರಣೆಗೊಳಪಡಿಸಲಾಗಿದೆ.

Join Whatsapp