ಮಂಗಳೂರು: ಮಂಗಳೂರಿನಲ್ಲಿ ಧರ್ಮ ರಾಜಕೀಯ ಇದೆ. ಬಿಜೆಪಿ ಅಭಿವೃದ್ಧಿ ಮಾಡುತ್ತಾ ಇಲ್ಲ. ಈ ಜಿಲ್ಲೆಯ ಬಗ್ಗೆ ನಾವು ಹೊಸ ಅಲೋಚನೆ ಮಾಡುತ್ತೇವೆ. ಉದ್ಯೋಗ ಸೃಷ್ಟಿಸುತ್ತೇವೆ, ಸಂಜೆ ಏಳು ಗಂಟೆ ಬಳಿಕ ಮಂಗಳೂರು ಡೆಡ್ ಸಿಟಿ ಆಗಿದೆ. ವ್ಯಾಪಾರ ವಹಿವಾಟು ನಡೆದು ಜನರಿಗೆ ಉದ್ಯೋಗ ಸಿಗಬೇಕು. ಇಲ್ಲಿನ ಬ್ಯಾಂಕ್ ಗಳು ಕೂಡ ಇಲ್ಲಿಂದ ಬೇರೆ ಕಡೆ ಹೋಗುತ್ತಾ ಇವೆ. ಇಲ್ಲಿನ ಜನ ದೇವಸ್ಥಾನಗಳಲ್ಲಿ ಭಕ್ತಿಯಿಂದ ಇರುತ್ತಾರೆ. ಅದೇ ವ್ಯವಹಾರಗಳಲ್ಲೂ ಇರಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶ ಮೈದಾನದ ಬಳಿ ಮಾತನಾಡಿದ ಅವರು, ರಾಜಕೀಯದಲ್ಲಿ ಯಾವುದೂ ಶಾಶ್ವತ ಹಾಗೂ ಅಸಾಧ್ಯವಲ್ಲ. ರಾಜಕಾರಣ ಸಾಧ್ಯತೆಗಳ ಕಲೆ, ಹೀಗಾಗಿ ಇಲ್ಲಿ ಬದಲಾವಣೆ ವಿಶ್ವಾಸವಿದೆ. ಹೀಗಾಗಿ ಮಂಗಳೂರಿನಲ್ಲಿ ಈ ಬಾರಿ ಸಮಾವೇಶ ಮಾಡುತ್ತಾ ಇದ್ದೇವೆ. ಈ ಭಾಗದಲ್ಲಿ ನಾವು ಗೆಲ್ಲುವ ಸಾಧ್ಯತೆ ಹೆಚ್ಚಿದೆ, ಹಾಗಾಗಿ ಸಮಾವೇಶ ಮಾಡುತ್ತಿದ್ದೇವೆ. ಇಲ್ಲಿ ನಿರುದ್ಯೋಗ ಇದೆ, ಇಲ್ಲಿನ ಜನ ಬೇರೆ ಕಡೆ ಉದ್ಯೋಗಕ್ಕೆ ಹೋಗುತ್ತಾ ಇದ್ದಾರೆ. ಇಲ್ಲಿನವರು ಸೌದಿ, ಬೆಂಗಳೂರು, ಮುಂಬೈ ಕಡೆ ಹೋಗುತ್ತಾ ಇದ್ದಾರೆ. ಇಲ್ಲಿ ಎಷ್ಟೇ ಶಿಕ್ಷಣ ಸಂಸ್ಥೆಗಳಿದ್ದರೂ ಮಕ್ಕಳು ಡ್ರಾಪ್ ಔಟ್ ಆಗುತ್ತಿದ್ದಾರೆ ಎಂದು ಅವರು ತಿಳಿಸಿದರು.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಕುಮಾರಸ್ವಾಮಿ ವಿರುದ್ಧವೇ ಸ್ಪರ್ಧಿಸಿದ್ದವನು ನಾನು. ನನ್ನ ಸಹೋದರನ ವಿರುದ್ಧ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೂ ಆತನೇ ಗೆದ್ದಿದ್ದಾನೆ. ಬಿಜೆಪಿ, ಜೆಡಿಎಸ್ ನನ್ನ ಸಹೋದರನ ವಿರುದ್ಧ ಸ್ಪರ್ಧಿಸಿದ್ದಾಗಲೂ ಗೆದ್ದಿದ್ದಾನೆ. ಸುರೇಶ್ ದೆಹಲಿಯಲ್ಲಿ ಕೂರುವ ಎಂಪಿ ಅಲ್ಲ, ಹಳ್ಳಿಯ ಸಂಸದ ಎಂದು ಹೇಳಿದರು.