Home ಕರಾವಳಿ ಮಂಗಳೂರು: ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಹುಟ್ಟೂರಲ್ಲಿ ಹೀಗೊಂದು ಗೌರವ

ಮಂಗಳೂರು: ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಹುಟ್ಟೂರಲ್ಲಿ ಹೀಗೊಂದು ಗೌರವ

ಮಂಗಳೂರು: ಪದ್ಮಶ್ರೀ ಪುರಸ್ಕೃತ, ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ವಿಶಿಷ್ಟ ಗೌರವ ನೀಡಿ ಗ್ರಾಮ ಪಂಚಾಯತ್ ಮಾದರಿಯಾಗಿದೆ.


ಮಂಗಳೂರು ಹೊರವಲಯದ ಹರೇಕಳ ಗ್ರಾಮಕ್ಕೆ ನಿರ್ಮಾಣವಾಗುತ್ತಿರುವ ನೂತನ ಪಂಚಾಯತ್ ಕಟ್ಟಡದ ಗೋಡೆಗೆ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಚಿತ್ರವನ್ನು ರಚಿಸುವ ಮೂಲಕ ಅವರಿಗೆ ಗೌರವ ನೀಡಲಾಗಿದೆ.


ಶಾಸಕರ ವಿಶೇಷ ಹಾಗೂ ವಿವಿಧ ಅನುದಾನದಡಿ ಹರೇಕಳ ಗ್ರಾಮದಲ್ಲಿ ನೂತನ ಕಟ್ಟಡ ನಿರ್ಮಾಣವಾಗುತ್ತಿದ್ದು, ಶೀಘ್ರದಲ್ಲೇ ಉದ್ಘಾಟನೆಯಾಗಲಿದೆ.


ಈ ಬಗ್ಗೆ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷ ಬದ್ರುದ್ದೀನ್, ಕಿತ್ತಳೆ ವ್ಯಾಪಾರ ಮಾಡಿ ಶಾಲೆ ಕಟ್ಟಿಸಿ ಹಲವಾರು ಮಕ್ಕಳಿಗೆ ವಿದ್ಯೆಯನ್ನು ನೀಡಿದ್ದಾರೆ. ಇವರ ಸಾಧನೆಯ ಹೆಜ್ಜೆಗಳು ರಾಷ್ಟ್ರಪತಿ ಭವನದಲ್ಲಿ ‘ಪದ್ಮಶ್ರೀ’ ಪಡೆಯುವವರೆಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಸರ್ವ ಸದಸ್ಯರ ನಿರ್ಣಯದಂತೆ ಕಟ್ಟಡದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬ ಅವರ ಚಿತ್ರ ರಚಿಸಲಾಗಿದೆ.

Join Whatsapp
Exit mobile version