ಮಂಗಳೂರು: ಕಡಲ ತೀರದಲ್ಲಿ ಹೈಅಲರ್ಟ್ ಘೋಷಣೆ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

- Advertisement -

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನಲೆ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ.

ಮಂಗಳೂರಿನಲ್ಲಿ ಇಂದು ಧಾರಾಕಾರ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.



Join Whatsapp