ಮಂಗಳೂರು: ಸೆ. 2ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

Prasthutha|

ಮಂಗಳೂರು: ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಎಲ್ಲಾ ಶಾಲಾ – ಕಾಲೇಜುಗಳಿಗೆ ಸೆ. 2ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ನೀಡಿದ್ದಾರೆ‌.

- Advertisement -

ಸೆ.2 ರಂದು ಮಂಗಳೂರು ನಗರದ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುವುದರಿಂದ, ಈ ಸಮಯದಲ್ಲಿ ಹಚ್ಚಿನ ಜನದಟ್ಟಣೆ ಇರುವುದರಿಂದ ರಜೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಸ್ನಾತಕೊತ್ತರ ಪದವಿ, ಡಿಪ್ಲೋಮ, ಐ.ಟಿ.ಐ.ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಸೆ. 2 ರಂದು ರಜೆಯನ್ನು ಘೋಷಿಸಲಾಗಿದೆ

- Advertisement -

ಪ್ರಸ್ತುತ ನೀಡಿರುವ ರಜೆ ಅವದಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ನಿರ್ವಹಿಸುವಂತೆ ತಿಳಿಸಲಾಗಿದೆ.

Join Whatsapp