ಮಂಗಳೂರು: ಕರ್ತವ್ಯದಲ್ಲೇ ಗುಪ್ತಚರ ಇಲಾಖೆ ಸಿಬ್ಬಂದಿಗೆ ಹೃದಯಾಘಾತ, ಸ್ಥಳದಲ್ಲೇ ಮೃತ್ಯು

Prasthutha|

ಮಂಗಳೂರು: ಕರ್ತವ್ಯದಲ್ಲಿ ಇದ್ದಾಗಲೇ ಗುಪ್ತಚರ ಇಲಾಖೆ ಸಿಬ್ಬಂದಿಗೆ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

- Advertisement -

ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು (45) ಮೃತ ಸಿಬ್ಬಂದಿ.

ಇಂದು(ಸೆ.16) ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಎ ಎಸ್.ಐ ರಾಜೇಶ್ ಬಿ ಕುಸಿದು ಬಿದ್ದಿದ್ದಾರೆ. 1993 ನೇ ಬ್ಯಾಚ್ನ ಪೂಲೀಸ್ ಸಿಬ್ಬಂದಿಯಾಗಿದ್ದ ರಾಜೇಶ್, ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯ ಸಿಬ್ಬಂದಿಯೂ ಆಗಿ ಕಾರ್ಯನಿರ್ವಹಿಸುತ್ತಿದ್ದರು.