ಮಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

Prasthutha|

ಮಂಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನದ ಪೀಠಿಕೆಯ ಓದು ಕಾರ್ಯಕ್ರಮ ಸೆ.15ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು

- Advertisement -

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್,ಅಪರ ಜಿಲ್ಲಾಧಿಕಾರಿ ಡಾ. ಡಿ. ಜಿ. ಸಂತೋಷ್ ಕುಮಾರ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಡಾ. ಆನಂದ್. ಕೆ, ಸಮಾಜ ಕಲ್ಯಾಣ ಉಪನಿರ್ದೇಶಕರಾದ ಮಾಲತಿ. ಬಿ, ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿಯಾದ ರಘು. ಕೆ. ಇ, ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯವಾದಿ ಅರುಣಾ. ಬಿ. ಪಿ ಉಪಸ್ಥಿತರಿದ್ದರು.

ವಿವಿಧ ಇಲಾಖೆಯ ಅಧಿಕಾರಿಗಳು, ವಸತಿ ನಿಲಯದ ವಿದ್ಯಾರ್ಥಿಗಳು, ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.