ಮಂಗಳೂರು: ನಗರದ ಎಮ್ಮೆಕೆರೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ಲೋಕಾರ್ಪಣೆ ಕಾರ್ಯಕ್ರಮವನ್ನು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ನೇರವೇರಿಸಿದರು.
ಈಜುಕೊಳ ಉದ್ಘಾಟಿಸಿದ ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ಮಾತನಾಡಿ, ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಆದಾಯ ಸೃಷ್ಟಿಸುವ ಯೋಜನೆಗಿಂತ ಹೆಚ್ಚಾಗಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ. ಇನ್ನು ಮುಂದೆಯಾದರೂ ಮಹಾನಗರ ಪಾಲಿಕೆಯ ಯಾವುದಾದರೂ ಯೋಜನೆಯಡಿ ಆದಾಯ ವೃದ್ಧಿಸುವ ಕಾಮಗಾರಿ ಕೈಗೆತ್ತಿಕೊಳ್ಳೋಣ ಎಂದರು.
ರಾಜ್ಯ ವಿಧಾನ ಸಭಾಧ್ಯಕ್ಷರಾದ ಯು ಟಿ ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸದಸ್ಯರುಗಳ ಸಹಿತ ಅನೇಕ ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.