►ರಸ್ತೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್… ಹೇಳುವವರಿಲ್ಲ, ಕೇಳುವವರಿಲ್ಲ
ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಆಯುಷ್ಮಾನ್ ವಿಭಾಗಕ್ಕೆ ಹೋಗುವ ರಸ್ತೆಯಲ್ಲಿ ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್ ರೋಗಿಗಳಿಗೆ ತೊಂದರೆಯುಂಟು ಮಾಡಿದೆ.
ಆಸ್ಪತ್ರೆ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನಗಳನ್ನು ರಸ್ತೆ ಮೇಲೆ ನಿಲ್ಲಿಸುವುದರಿಂದ ಇಲ್ಲಿ ಸದಾ ಟ್ರಾಫಿಕ್ ಜಾಮ್ ಉಂಟಾಗಿ ಆಂಬ್ಯುಲೆನ್ಸ್ ಹೋಗಲು ಮಾರ್ಗ ಇಲ್ಲದಂತಾಗಿದೆ.
ಇವತ್ತು ರೋಗಿಯೊಬ್ಬರನ್ನು ಹೊತ್ತು ತಂದ ಆಂಬ್ಯುಲೆನ್ಸ್ ಅಡ್ಡಾದಿಡ್ಡಿ ಪಾರ್ಕಿಂಗ್ ನಲ್ಲಿ ಸಿಲುಕಿ ಪರದಾಡುವಂತಾಗಿತ್ತು.
ದಿನನಿತ್ಯ ಇದೇ ಸಮಸ್ಯೆ ಎದುರಾಗುತ್ತಿದ್ದು. ವೆನ್ಲಾಕ್ ಆಸ್ಪತ್ರೆಯ ಆಡಳಿತ ಮಂಡಳಿ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ವೆನ್ಲಾಕ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.