ಮಂಗಳೂರು: ಸಂತ ಜೆರೋಸಾ ಶಾಲೆಯ ಶಿಕ್ಷಕಿ ಹಿಂದೂ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ಕೇಳಿಬಂದ ಗಂಭೀರ ಆರೋಪ ಸಂಬಂಧ ಸಮಗ್ರ ತನಿಖೆಗೆ ಐಎಎಸ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. IAS ಅಧಿಕಾರಿ ಡಾ.ಎಸ್.ಆಕಾಶ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದರು.
ದೂರು ಆಧರಿಸಿ ಎಫ್ ಐಆರ್ ದಾಖಲಿಸಲಾಗಿದೆ. ಶೀಘ್ರದಲ್ಲೇ ಸತ್ಯಾಂಶ ತಿಳಿಯುತ್ತದೆ. ತುರ್ತಾಗಿ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು.