ಧರ್ಮ ನಿಂದನೆ ಆರೋಪ: ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿ ವಜಾ

Prasthutha|

ಮಂಗಳೂರು: ತರಗತಿಯಲ್ಲಿ ಧರ್ಮ ನಿಂದನೆ ಮಾಡಿದ್ದಾರೆ ಎಂದು ಆರೋಪದಲ್ಲಿ ನಗರದ ಜೆರೋಸಾ ಕಾನ್ವೆಂಟ್ ನ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಶಾಲಾ ಆಡಳಿತ ವಜಾ ಮಾಡಿದೆ.

- Advertisement -


“ನಮ್ಮ ಸಂಸ್ಥೆಯು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ಈಗ ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಸಿಸ್ಟರ್ ಪ್ರಭಾ ಅವರನ್ನು ಈ ಕ್ಷಣದಿಂದ ಸಂಸ್ಥೆಯಿಂದ ವಜಾಗೊಳಿಸಿ ಅವರ ಸ್ಥಾನಕ್ಕೆ ಮತ್ತೊಬ್ಬ ಶಿಕ್ಷಕರನ್ನು ನೇಮಕ ಮಾಡಲಾಗಿದೆ” ಎಂದು ಶಾಲೆಯ ಮುಖ್ಯ ಶಿಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಜಿಲ್ಲಾಮಟ್ಟದ ಅಧಿಕಾರಿಗಳಿಂದ ನಡೆಯುತ್ತಿರುವ ತನಿಖೆ ಪಾರದರ್ಶಕತೆಯಿಂದ ಕೂಡಿರಲು ನಮ್ಮ ಸಹಕಾರ ತೆಗೆದುಕೊಳ್ಳಲಾಗಿದೆ. ನಾವು ತನಿಖೆಯ ಅಂತಿಮ ಆದೇಶಕ್ಕೆ ಬದ್ಧರಾಗಿರುತ್ತೇವೆ ಮತ್ತು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪೋಷಕರಿಂದ ಇದೇ ರೀತಿ ಸಹಕಾರ ನಿರೀಕ್ಷಿಸುತ್ತೇವೆ” ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

- Advertisement -

ಸಂಘಪರಿವಾರದ ಕಾರ್ಯಕರ್ತರು ಮತ್ತು ಶಾಸಕರಿಬ್ಬರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಜೆರೋಸಾ ಕಾನ್ವೆಂಟ್ ನ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಶಾಲಾ ಆಡಳಿತ ವಜಾ ಮಾಡಿದೆ.



Join Whatsapp