ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ‘ಮೀಫ್’ ನಿಂದ ಸಂತೋಷದ ಕೂಟ

Prasthutha|

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಸಮುದಾಯದಲ್ಲಿ ಶೈಕ್ಷಣಿಕ ಕ್ರಾಂತಿ ಸೃಷ್ಟಿಸಲು ಶ್ರಮಿಸಿದ ‘ಮೀಫ್’ ಸಂಘಟನೆಗೆ 2023ನೇ ಕರ್ನಾಟಕ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ ಹಿನ್ನಲೆಯಲ್ಲಿ ಇಂದು ‘ಸಂತೋಷ ಕೂಟ’ವನ್ನು ಏರ್ಪಡಿಸಲಾಗಿತ್ತು.

- Advertisement -


ಜುಲೈ 2023 ರಂದು ‘ಮೀಫ್’ ನಿಯೋಗವು ಬೆಂಗಳೂರಿಗೆ ತೆರಳಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಮತ್ತು ಸರಕಾರದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ರವರನ್ನು ಭೇಟಿಯಾಗಿ ಮನವಿ ನೀಡಲಾಗಿತ್ತು. ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ನಮ್ಮ ಸಮಸ್ಯೆಗಳ ಪರಿಹಾರಕ್ಕೆ ಭರವಸೆ ನೀಡಿರುತ್ತಾರೆ. ಶೀಘ್ರ ಸರ್ಕಾರಿ ಆದೇಶದ ನಿರೀಕ್ಷೆಯಲ್ಲಿರುತ್ತೇವೆ ಎಂದು ‘ಮೀಫ್’ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.


ಪ್ರಮುಖ ಬೇಡಿಕೆಗಳು ಮತ್ತು ಸಮಸ್ಯೆಗಳ ಮುಖ್ಯಾಂಶಗಳು:

- Advertisement -
  • ಶಾಲೆಗಳ ಮಾನ್ಯತೆ ನವೀಕರಣ 10 ವರ್ಷಗಳಿಗೆ ವಿಸ್ತರಣೆ ಮಾಡುವುದು.
  • 2017-18ಕ್ಕೆ (ಕೋರ್ಟು ಆದೇಶ) 2020-21 ಕ್ಕೆ ಮುಂಚಿತವಾಗಿ ನಿರ್ಮಾಣಗೊಂಡ ಕಟ್ಟಡಗಳಿಗೆ ಅಗ್ನಿಶಾಮಕ ನಿರಾಕ್ಷೇಪಣಾ ಪತ್ರ, ಲೋಕೋಪಯೋಗಿ ಇಲಾಖೆಯ ಕಟ್ಟಡ ಸುರಕ್ಷತಾ ಪ್ರಮಾಣ ಪತ್ರ ಕಡ್ಡಾಯಗೊಳಿಸಿರುವುದನ್ನು ರದ್ದುಪಡಿಸಿ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿರುವ ತೀರ್ಪನ್ನು ಅನುಷ್ಠಾನಗೊಳಿಸುವರೇ ಸರಕಾರ ಸುತ್ತೋಲೆ ಹೊರಡಿಸಲು ಕ್ರಮ ವಹಿಸಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.
  • ಪ್ರೌಢಶಾಲೆಗೆ ಮಾನ್ಯತೆ ನೀಡಲು ಕನಿಷ್ಠ 25 ವಿದ್ಯಾರ್ಥಿಗಳು ಇರಬೇಕೆಂಬ ನಿಯಮವನ್ನು 10 ವಿದ್ಯಾರ್ಥಿಗಳ ಸಂಖ್ಯೆಗೆ ಇಳಿಸಬೇಕು.
  • ಪದವಿ ಪೂರ್ವ ಕಾಲೇಜಿನ ಹೊಸ ನಿಯಮಾವಳಿಯಂತೆ ಎಲ್ಲಾ ಸಂಯೋಜನೆ ವಿಭಾಗಗಳಲ್ಲಿ ಕನಿಷ್ಠ ವಿದ್ಯಾರ್ಥಿಗಳ ಸಂಖ್ಯೆಯನ್ನು ಖಡ್ಡಾಯಗೊಳಿಸಿರುವುದನ್ನು ಕೈ ಬಿಡುವುದು.
  • ಸರಕಾರ ನೀಡುವ ತರಬೇತಿಗಳಿಗೆ ಖಾಸಗಿ ಶಾಲೆಗಳ ಶಿಕ್ಷಕರನ್ನು ಪ್ರತ್ಯೇಕವಾಗಿ ಪರಿಗಣಿಸಿ ತರಬೇತಿ ನೀಡುವುದು.
  • ಬ್ಯಾರಿ ಭಾಷೆಯನ್ನು ಭಾಷಾ ಅಲ್ಪಸಂಖ್ಯಾತ ಎಂದು ಘೋಷಿಸಿ ಉನ್ನತ ಶಿಕ್ಷಣ ಪ್ರವೇಶಾತಿಯಲ್ಲಿ ಪ್ರತ್ಯೇಕ ಕೋಟಾ ನಿಗದಿಪಡಿಸಬೇಕು.

ಕಳೆದ ವರ್ಷ ನೀಟ್, ಸಿಇಟಿ ವಿದ್ಯಾರ್ಥಿಗಳ ದಾಖಲೆಗಳ ಪರಿಶೀಲನೆಗೆ ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ತೆರೆದ ಕೇಂದ್ರವನ್ನು ಮುಚ್ಚಿ ಬೆಂಗಳೂರಿಗೆ ವರ್ಗಾಯಿಸಿದ್ದು, ದ. ಕ. ಮತ್ತು ಆಸುಪಾಸಿನ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದ್ದು, ಮುಂದಿನ ವರ್ಷದಿಂದ ಮರು ಸ್ಥಾಪಿಸಬೇಕು.

  • ಪಟ್ಟಣ ಪ್ರದೇಶದಲ್ಲಿ ಶಾಲಾ ಕಟ್ಟಡಗಳಿಗೆ ಕಟ್ಟಡ ತೆರಿಗೆ ವಿನಾಯಿತಿ ನೀಡಿದ್ದು ಗ್ರಾಮಾಂತರದಲ್ಲಿ ಗ್ರಾಮ ಪಂಚಾಯತ್ ಆಸ್ತಿ ತೆರಿಗೆ, ಕಟ್ಟಡ ತೆರಿಗೆಗಳನ್ನು ವಿಧಿಸುತ್ತಿದ್ದು, ತೆರಿಗೆ ವಿನಾಯಿತಿ ನೀಡುವಂತೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಶಿಫಾರಸ್ಸು ಮಾಡುವುದು.

ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರುಗಳನ್ನು ಪರಿಗಣಿಸುವುದು.

  • ಹಳೆಯ ಕಟ್ಟಡಗಳಿಗೆ ಈಗಾಗಲೇ ನೀಡಿರುವ ವಾಣಿಜ್ಯ, ವಾಸ್ತವೇತರ ಭೂಪರಿವರ್ತನಾ ಆದೇಶವನ್ನು ಶೈಕ್ಷಣಿಕ ಉದ್ದೇಶಕ್ಕೆ ಮರು ಆದೇಶ ಪಡೆಯಲು ಮಾಡಲು ತಾಂತ್ರಿಕ ತೊಂದರೆಗಳಿರುವುದರಿಂದ ಅಸ್ತಿತ್ವದಲ್ಲಿರುವ ಶಾಲೆಗಳಿಗೆ ಈ ನಿಯಮ ಸಡಿಲಿಸಬೇಕು.
  • ಅಗ್ನಿಶಾಮಕ ನಿರಾಕ್ಷೇಪಣಾ ಪತ್ರ, ಕಟ್ಟಡ ಸುರಕ್ಷತೆ ಪ್ರಮಾಣ ಪತ್ರಗಳಿಗೆ 5 ವರ್ಷಗಳ ಅವಧಿ ನಿಗದಿ ಪಡಿಸುವುದು.

ಮೇಲಿನ ಬೇಡಿಕೆಗಳನ್ನು ಪರಿಶೀಲಿಸಿದ ಶಿಕ್ಷಣ ಸಚಿವರು ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವಂತೆ ಸೂಚನೆ ನೀಡಿದ್ದು, ಸಮಗ್ರವಾಗಿ ಅಧ್ಯಯನ ವರದಿ ತಯಾರಿಸಿ ಯಾವುದೇ ವಿಳಂಬ ಮಾಡದೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಮೀಫ್ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.



Join Whatsapp