ಮಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

Prasthutha|

ಮಂಗಳೂರು: ಖಾತೆ ಬದಲಾವಣೆ ಸಂಬಂಧ ಲಂಚಕ್ಕೆ ಬೇಡಿಕೆಯಿಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

- Advertisement -

 ಕೌಕ್ರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಅಧಿಕಾರಿ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ನಿವಾಸಿಯೊಬ್ಬರ ಕೌಕ್ರಾಡಿಯ ತಮ್ಮ ಜಮೀನಿನಲ್ಲಿ ಖಾತೆ ಬದಲಾವಣೆಗೆ 20 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಜೂ. 22 ರಂದು 20 ಸಾವಿರ ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಪಿಡಿಓ ಮಹೇಶ್‍ನನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿರುತ್ತಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ ಸೈಮನ್ ಮಾರ್ಗದರ್ಶನದಲ್ಲಿ ಉಪ ಅಧೀಕ್ಷಕರಾದ ಕಲಾವತಿ, ಚೆಲುವರಾಜ್ ಹಾಗೂ ಪೊಲೀಸ್ ನಿರೀಕ್ಷಕ ಅಮಾನುಲ್ಲಾ, ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.