ಮಂಗಳೂರು: ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

Prasthutha|

ಮಂಗಳೂರು: ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಗಳಿಗೆ ದಾಳಿ ನಡೆಸಿದ ಕರ್ನಾಟಕ ಲೋಕಾಯುಕ್ತ ಪೊಲೀಸರು 40 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಯ ಬಗ್ಗೆ ದೂರುಗಳು ಲೋಕಾಯುಕ್ತ ಸಂಸ್ಥೆಗೆ ಬಂದ ಹಿನ್ನೆಲೆಯಲ್ಲಿ   ಮಂಗಳೂರು ವಿಭಾಗದ ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕ ಲಕ್ಷ್ಮೀಗಣೇಶ್‌ ಕೆ.ಅವರು ಡಿವೈಎಸ್‌ಪಿಗಳಾದ ಕಲಾವತಿ,  ಚಲುವರಾಜು ಬಿ,. ಪೊಲೀಸ್ ಇನ್ಸ್’ಪೆಕ್ಟರ್ ಅಮಾನುಲ್ಲಾ ಎ ನೇತೃತ್ವದ 3 ತಂಡಗಳನ್ನು ರಚಿಸಿ ದಾಳಿಗೆ ಆದೇಶಿಸಿದ್ದರು.

 ಈ ತಂಡವು ಮುಲ್ಕಿ, ಬೆಳ್ತಂಗಡಿ, ಮತ್ತು ಬಂಟ್ವಾಳ ಮುಂತಾದ ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ ಸ್ಥಳಗಳಲ್ಲಿ ದಾಳಿ ನಡೆಸಿ ಲಾರಿ, ಟಿಪ್ಪರ್, ಜೆಸಿಬಿ, ಮತ್ತು ಮರಳು ಸೇರಿದಂತೆ ಒಟ್ಟು ಸುಮಾರು 40 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಹಸ್ತಾಂತರಿಸಿದ್ದು, ಈ ಬಗ್ಗೆ ಮೂರು ಕ್ರಿಮಿನಲ್ ಪ್ರಕರಣಗಳು ದಾಖಲಿಸಲಾಗಿದೆ. ಇನ್ನು ಅನೇಕ ಕಡೆಗಳಲ್ಲಿ ಅಕ್ರಮವಾಗಿ ಗಣಿಗಾರಿಕೆ ಮತ್ತು ನಿಯಮ ಮೀರಿ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ.

- Advertisement -

ಅಕ್ರಮ ಮರಳುಗಾರಿಕೆಯಿಂದ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತಿದ್ದು, ಈ ವಿಚಾರದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ನಿರ್ಲಕ್ಷತನದ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಲಕ್ಷ್ಮೀಗಣೇಶ್‌ ಕೆ. ಎಚ್ಚರಿಸಿದ್ದಾರೆ.

Join Whatsapp