ಮಂಗಳೂರು: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಮಂಗಳೂರು ಗ್ರಾಮಾಂತರ ಠಾಣೆಯ ಕಂಬಳ ಎಂಬಲ್ಲಿ ನಡೆದಿದೆ.
ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟು ತಗುಲಿದಾತ. ಇತ್ತೀಚೆಗೆ ನಗರದ ಹೊರವಲಯದಲ್ಲಿ ನಡೆದ ಚಾಕು ಇರಿತ ಪ್ರಕರಣ ಸಂಬಂಧ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಈತನನ್ನು ಇಂದು ಸ್ಥಳ ಮಹಜರಿಗಾಗಿ ಘಟನಾ ಸ್ಥಳಕ್ಕೆ ಕರೆತರಲಾಗಿತ್ತು. ಈ ವೇಳೆ ಆರೋಪಿ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಆ.19 ರಂದು ತನ್ನ ಸಂಬಂಧಿಕರೊಬ್ಬರನ್ನು ಮುಸ್ತಾಕ್ ಕೊಲೆಗೆ ಯತ್ನಿಸಿದ್ದ ಎನ್ನಲಾಗಿದೆ. ಗುಂಡೇಟು ತಿಂದ ಮುಸ್ತಾಕ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ಆಸ್ಪತ್ರೆಗೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿದ್ದಾರೆ.