Home ಟಾಪ್ ಸುದ್ದಿಗಳು ಮಂಗಳೂರು: ನೇತ್ರಾವತಿ ನದಿ ತಟದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು: ನೇತ್ರಾವತಿ ನದಿ ತಟದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಉಳ್ಳಾಲ: ನೇತ್ರಾವತಿ ನದಿ ತಟದಲ್ಲಿ ವ್ಯಕ್ತಿಯೋರ್ವರ ಮೃತದೇಹ ಶನಿವಾರ ಸಂಜೆ ವೇಳೆ ಪತ್ತೆಯಾಗಿದೆ.

ಮೃತದೇಹ ಸುಮಾರು 40-50ರ ಹರೆಯದ ವ್ಯಕ್ತಿಯದ್ದಾಗಿದ್ದು, ಮೃತ ವ್ಯಕ್ತಿ ಚಿಕ್ಕಮಗಳೂರು ಮೂಲದ ನಿವಾಸಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ ಚಿಕಿತ್ಸೆ ನಿಮಿತ್ತ ಮಂಗಳೂರಿಗೆ ಬಂದಿದ್ದರು. ಅವರು‌ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

Join Whatsapp
Exit mobile version