Home ಕರಾವಳಿ ಮಂಗಳೂರು: ಲಾಡ್ಜ್’ನಲ್ಲಿ ಶಂಕಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು: ಲಾಡ್ಜ್’ನಲ್ಲಿ ಶಂಕಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು: ನಗರದ ಪಂಪ್’ವೆಲ್ ಬಳಿಯ ಪದ್ಮಶ್ರೀ ಲಾಡ್ಜ್’ನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಶಂಕಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.


ಮೃತ ವ್ಯಕ್ತಿಯ ಕೊಠಡಿಯಲ್ಲಿ ಇದ್ದ ಚಾಲನಾ ಪರವಾನಿಗೆಯ ಆಧಾರದಲ್ಲಿ ಅವರನ್ನು ಕಾಸರಗೋಡು ಪೈವಳಿಕೆ ನಿವಾಸಿ ಅಬ್ದುಲ್ ಕರೀಂ (55) ಎಂದು ಗುರುತಿಸಲಾಗಿದೆ.
ವ್ಯಕ್ತಿಯ ಮೃತದೇಹವು ಸಂಪೂರ್ಣ ಬೆತ್ತಲೆ ಸ್ಥಿತಿಯಲ್ಲಿದ್ದು, ಸಮೀಪದಲ್ಲೇ ಕೆಲವು ಬಗೆಯ ಮಾತ್ರೆಗಳು ಪತ್ತೆಯಾಗಿವೆ. ಲಾಡ್ಜ್ ನಲ್ಲಿ ಕರೀಂ ಅವರನ್ನು ಭೇಟಿಯಾಗಲು ಮಹಿಳೆಯೊಬ್ಬಳು ಬಂದಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ತಿಳಿದುಬಂದಿದೆ.


ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp
Exit mobile version