ಸೆ.9ರಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣೆ

Prasthutha|

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಸೆ. 9ರಂದು ಚುನಾವಣೆ ನಡೆಯಲಿದೆ.

- Advertisement -


23ನೇ ಅವಧಿಗೆ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾತಿ ನಿಗದಿಯಾಗಿತ್ತು. ಆದರೆ ಆಗಸ್ಟ್ 24ರಂದು ಪಾಲಿಕೆಯ 24ನೇ ಅವಧಿಯ ಮೀಸಲಾತಿ ಪ್ರಕಟಗೊಂಡಿದೆ. ಮೇಯರ್ ಸ್ಥಾನ ಸಾಮಾನ್ಯ, ಉಪಮೇಯರ್ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ ನಿಗದಿಯಾಗಿದೆ. ಮಹಾನಗರ ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಎಸ್ ಡಿಪಿಐ ಎರಡು ಸ್ಥಾನಗಳನ್ನು ಹೊಂದಿವೆ.



Join Whatsapp