ಮಂಗಳೂರು: ವಿಷಾಹಾರ ಸೇವಿಸಿ ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದ್ದು, ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಈ ರೀತಿ ಆಗಿದೆ ಎಂದು ವಿದ್ಯಾರ್ಥಿನಿಯರ ಹೆತ್ತವರು ತಿಳಿಸಿದ್ದಾರೆ.
ಇನ್ನು ಕೆಲವು ವಿದ್ಯಾರ್ಥಿನಿಯರಿಗೆ ವಾಂತಿ ಮತ್ತು ಭೇದಿ ಉಂಟಾಗಿದ್ದು, ಹೊಟ್ಟೆ ನೋವಿನಿಂದ ಬಳಲಿದ್ದಾರೆ. ರಾತ್ರಿ ವೇಳೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಬೆಳಗ್ಗಿನ ಹೊತ್ತಿಗೆ ಮರಳಿ ಹಾಸ್ಟೆಲ್ ಗೆ ರವಾನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.