Home ಟಾಪ್ ಸುದ್ದಿಗಳು ಮಂಗಳೂರು: ಕುಡುಪು ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಸ್ಥಳ ನಿರಾಕರಣೆ

ಮಂಗಳೂರು: ಕುಡುಪು ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಸ್ಥಳ ನಿರಾಕರಣೆ

ಮಂಗಳೂರು: ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ ಎಂದು ತಿಳಿದು ಬಂದಿದೆ.

ಬೀದಿ ಬದಿ ವ್ಯಾಪಾರಿಗಳ ಸಂಘ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಿದೆ.

ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದಲ್ಲಿ ಡಿಸೆಂಬರ್ 14 ರಿಂದ 19 ರವರೆಗೆ ಷಷ್ಟಿ ಮಹೋತ್ಸವದ ಜಾತ್ರೆ ನಡೆಯಲಿದೆ. ಆದರೆ, ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಪ್ರಾಂಗಣದ ಹೊರಗಡೆ ನಡೆಯುವ ಸಂತೆ ವ್ಯಾಪಾರದಲ್ಲಿ ಧಾರ್ಮಿಕ ತಾರತಮ್ಯ ಆರೋಪ ಕೇಳಿಬಂದಿದೆ. ದೇವಸ್ಥಾನದ ಆಡಳಿತ ಮಂಡಳಿ ಇಂದು ದೇವಸ್ಥಾನದ ಸಂತೆ ವ್ಯಾಪಾರದ ಹಂಚಿಕೆ ನಡೆಸಿದೆ. ಈ ವೇಳೆ ಜಾಗ ಕೇಳಲು ಹೋಗಿದ್ದ ಮುಸ್ಲಿಂ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರಾಕರಣೆ ಮಾಡಲಾಗಿದೆ.

Join Whatsapp
Exit mobile version