ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ: ಮುಸ್ಲಿಮ್ ಯುವಕನ ಮೇಲೆ ಸಂಘಪರಿವಾರದಿಂದ ಹಲ್ಲೆ

Prasthutha|

ಮಂಗಳೂರು: ಬಸ್ ನಲ್ಲಿ ಯುವತಿಯೊಂದಿಗೆ ಪ್ರಯಾಣಿಸುತ್ತಿದ್ದಾನೆ ಎಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಮ್ ಯುವಕನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿರುವ ಘಟನೆ ನಂತೂರು ಬಳಿ ನಡೆದಿದೆ.

- Advertisement -


ಕಾರ್ಕಳದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಯುವಕ ಮತ್ತು ಯುವತಿ ಒಂದೇ ಸೀಟಿನಲ್ಲಿ ಕುಳಿತುಕೊಂಡಿದ್ದರು ಎನ್ನಲಾಗಿದೆ. ಇದನ್ನೇ ನೆಪವಾಗಿಟ್ಟುಕೊಂಡು ನಂತೂರು ಬಳಿ ಬಸ್ ತಡೆದು ನಿಲ್ಲಿಸಿದ ಸಂಘಪರಿವಾರದ ಕಾರ್ಯಕರ್ತರು ಬಸ್ ನಿಂದ ಇಬ್ಬರನ್ನು ಕೆಳಗಿಳಿಸಿ ಥಳಿಸಿದ್ದಾರೆ ಎನ್ನಲಾಗಿದೆ.


ಗಾಯಗೊಂಡ ಯುವಕ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.

- Advertisement -

ತಪ್ಪಿತಸ್ಥರ ವಿರುದ್ಧ ಕ್ರಮ: ಎಡಿಜಿಪಿ ಅಲೋಕ್ ಕುಮಾರ್

ಮಂಗಳೂರಿನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಘಟನೆಗೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

Join Whatsapp