ಮಂಗಳೂರು: ಜೂ. 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ

Prasthutha|

ಮಂಗಳೂರು: ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಹಾಗೂ ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಸಂಯುಕ್ತಾಶ್ರಯದಲ್ಲಿ ಇದೇ ಜೂ.27ರ ಮಂಗಳವಾರ ಬೆಳಿಗ್ಗೆ 10.30ಕ್ಕೆ ನಗರದ ಉರ್ವಾಸ್ಟೋರ್ ನಲ್ಲಿರುವ ತುಳುಭವನದ ಸಿರಿ ಛಾವಡಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಹಮ್ಮಿಕೊಳ್ಳಲಾಗಿದೆ.  

- Advertisement -

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

     ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್ ಅವರು ಗೌರವ ಉಪಸ್ಥಿತಿ ವಹಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.

- Advertisement -

       ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ನಳಿನ್‍ಕುಮಾರ್ ಕಟೀಲ್, ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಉಳಿಪಾಡಿ, ಉಮಾನಾಥ ಎ. ಕೋಟ್ಯಾನ್, ಅಶೋಕ್ ಕುಮಾರ್ ರೈ, ಕುಮಾರಿ ಭಾಗೀರಥಿ ಮುರುಳ್ಯ ಹಾಗೂ ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ ಹಾಗೂ ನಿಗಮ, ಮಂಡಳಿಗಳು ಮತ್ತು ಅಕಾಡೆಮಿಗಳ ಅಧ್ಯಕ್ಷರು ಭಾಗವಹಿಸುವರು.