Home ಟಾಪ್ ಸುದ್ದಿಗಳು ಮಂಗಳೂರು | ರಸ್ತೆಯಲ್ಲಿ ನಮಾಝ್ ಮಾಡಿದ ಆರೋಪ: ಸುಮೊಟೊ ಕೇಸ್ ದಾಖಲು

ಮಂಗಳೂರು | ರಸ್ತೆಯಲ್ಲಿ ನಮಾಝ್ ಮಾಡಿದ ಆರೋಪ: ಸುಮೊಟೊ ಕೇಸ್ ದಾಖಲು

ಮಂಗಳೂರು: ನಗರದ ಕಂಕನಾಡಿಯ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲಿ ಮೇ 24ರಂದು ನಮಾಝ್ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸುಮೊಟೊ‌ ಕೇಸ್ ದಾಖಲಿಸಲಾಗಿದೆ.

ಈ ವೀಡಿಯೋ ಪರಿಶೀಲಿಸಲಾಗಿದ್ದು, ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡೆತಡೆಯನ್ನುಂಟು ಮಾಡಿದ ವ್ಯಕ್ತಿಗಳ ಮೇಲೆ ಸ್ವಯಂಪ್ರೇರಿತ (ಸುಮೊಟೊ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Join Whatsapp
Exit mobile version