ಮಂಗಳೂರು: ಖಾಸಗಿ ಕಾಲೇಜಿನಲ್ಲಿ NIA ಪರಿಶೀಲನೆ

Prasthutha|

ಮಂಗಳೂರು: ನಾಗುರಿಯಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್’ಐಎ ತಂಡ ನಗರದ ಹೊರವಲಯದ ಶಿಕ್ಷಣ ಸಂಸ್ಥೆಯೊಂದರ ಮೇಲೆ ಗುರುವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

- Advertisement -


ಶಿವಮೊಗ್ಗ ಬಾಂಬ್ ಟ್ರಯಲ್ ಆರೋಪದಲ್ಲಿ ಬಂಧಿತನಾಗಿರುವ ಮಾಝ್ ಮುನೀರ್ ಇಲ್ಲಿನ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಆತನ ದಾಖಲೆ ಇನ್ನಿತರ ಮಾಹಿತಿಗಳನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.


ಬೆಂಗಳೂರಿನಿಂದ ಮಂಗಳೂರಿಗೆ ಬಂದಿರುವ ಏಳು ಮಂದಿಯ ಎನ್’ಐಎ ತಂಡ ಶೋಧ ಕಾರ್ಯ ಕೈಗೊಂಡಿದೆ.

Join Whatsapp