ಮಂಗಳೂರು: ಹೃದಯಾಘಾತದಿಂದ ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು

Prasthutha|

ಮಂಗಳೂರು: ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ನರ್ಸಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.

- Advertisement -


ಸುಮಾ(19) ಮೃತ ವಿದ್ಯಾರ್ಥಿನಿ.


ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ಸುಮಾಗೆ ಆಗಾಗ ಆರೋಗ್ಯ ಕೈ ಕೊಟ್ಟಿದ್ದು ಲೋ ಬಿಪಿಯಾಗಿ ಹೃದಯಾಘಾತವಾಗಿ ಸಾವು ಸಂಭವಿಸಿದೆ.
ಆಗಸ್ಟ್ 9 ರಂದು ಅನಾರೋಗ್ಯದ ಕಾರಣ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಆ.11 ರಂದು ಮತ್ತೆ ಆರೋಗ್ಯ ಹಾಳಾಗಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಇನ್ನೇನು ಆರೋಗ್ಯ ಸರಿಯಾಯ್ತು ಎನ್ನವಷ್ಟುರಲ್ಲಿ ಮತ್ತೆ ಆ.13 ರಂದು ಸಂಜೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Join Whatsapp