ಮಂಗಳೂರು: ವಿದ್ಯುತ್ ಕಂಬಕ್ಕೆ ಟೆಂಪೋ ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Prasthutha|

ಮಂಗಳೂರು : ವಿದ್ಯುತ್ ಕಂಬಕ್ಕೆ ಟೆಂಪೋವೊಂದು ಡಿಕ್ಕಿ ಹೊಡೆದು ಚಾಲಕ ಮೃತಪಟ್ಟಿದ್ದಾನೆ.ಮತ್ತು ಇಬ್ಬರು ಗಾಯಗೊಂಡ ಘಟನೆ ನಗರದ ಹೊರವಲಯದ ಮುಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

- Advertisement -

ಕೆಎಸ್.ರಾವ್ ನಗರ ವಿಜಯಪುರ ಕಾಲೊನಿ ನಿವಾಸಿ ಯಶವಂತರಾಯ ಮೃತಪಟ್ಟ ಚಾಲಕ. ಗಾಯಗೊಂಡವರನ್ನು ಕುಮಾರ್ ಮತ್ತು ಭಗವಂತರಾಯ ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸಕ್ಕೆಂದು ಟೆಂಪೋದಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ವಾಹನವು ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು, ಚಾಲಕ ಹಾಗೂ ಮತ್ತಿಬ್ಬರು ಕೂಲಿ ಕಾರ್ಮಿಕರು ಟೆಂಪೋದ ಒಳಗೆ ಸಿಲುಕಿ ಒದ್ದಾಡುತ್ತಿದ್ದರು. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ



Join Whatsapp