Home ಕರಾವಳಿ ಮಂಗಳೂರು: ಎ.29ರ ವಕ್ಫ್ ತಿದ್ದುಪಡಿ ವಿರುದ್ಧ ಪ್ರತಿಭಟನೆಯ ಸ್ಥಳ ಬದಲಾವಣೆ

ಮಂಗಳೂರು: ಎ.29ರ ವಕ್ಫ್ ತಿದ್ದುಪಡಿ ವಿರುದ್ಧ ಪ್ರತಿಭಟನೆಯ ಸ್ಥಳ ಬದಲಾವಣೆ

0

►ಕೂಳೂರಿನ ಡೆಲ್ಟಾ ಮೈದಾನದಲ್ಲಿ ಪ್ರತಿಭಟನೆ

ಮಂಗಳೂರು: ಕೇಂದ್ರ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಎ.29 ರಂದು ನಡೆಯಬೇಕಿದ್ದ ಪ್ರತಿಭಟನೆಯ ಸ್ಥಳವನ್ನು ಬದಲಾಯಿಸಲಾಗಿದ್ದು, ಕೂಳೂರಿನ ಡೆಲ್ಟಾ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ.

ಈ ಮೊದಲು ಅಡ್ಯಾರಿನ ಷಾ ಮೈದಾನದಲ್ಲಿ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಲಾಗಿತ್ತು ಎಂದು ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ಉಪಾಧ್ಯಕ್ಷ ಹಾಗೂ ಮಾಜಿ ಮೇಯರ್ ಕೆ ಅಶ್ರಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ಹಾಗೂ ವಿವಿಧ ಮುಸ್ಲಿಂ ಸಂಘ-ಸಂಸ್ಥೆಗಳ ಸಭೆಯಲ್ಲಿ ಪ್ರತಿಭಟನೆಯ ಸ್ಥಳ ಬದಲಾವಣೆಯ ಬಗ್ಗೆ ತೀರ್ಮಾನಿಸಲಾಗಿದೆ.

ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ಅಲ್ ಹಾಜ್ ಕೆ ಎಸ್ ಮುಹಮ್ಮದ್ ಮಸೂದ್ ಸಭೆಯ ಅಧ್ಯಕ್ಷತೆ ವಹಿಸಿದ್ದರು ಎಂದು ಪ್ರಕಟನೆ ತಿಳಿಸಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version