ಮಂಗಳೂರು: ಪ್ರಚೋದನಾಕಾರಿ ಪೋಸ್ಟ್; ಲಕ್ಷದಷ್ಟು ಸಂಖ್ಯೆಯ ಫಾಲೋವರ್ಸ್ ಹೊಂದಿದ್ದ Instagram ಪೇಜ್ ರದ್ದು

- Advertisement -

ಮಂಗಳೂರು: ಇತ್ತೀಚೆಗೆ ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ 1 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿದ್ದ ಇನ್‌ಸ್ಟಾಗ್ರಾಂ ಫೇಜ್ ಅನ್ನು ನಿಷ್ಕ್ರಿಯಗೊಳಿಸಲಾಗಿದೆ.

- Advertisement -

‘beary_royal_nawab’ ಧಾರ್ಮಿಕ ಮತ್ತು ಸಮುದಾಯ ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುವ ವಿಷಯವನ್ನು ಪೋಸ್ಟ್ ಮಾಡುತ್ತಿತ್ತು. ಈ ಪೋಸ್ಟ್‌ಗಳು ಒಂದು ಸಮುದಾಯವನ್ನು ಮತ್ತೊಂದು ಸಮುದಾಯವನ್ನು ಗುರಿಯಾಗಿಸಿಕೊಂಡು ದ್ವೇಷವನ್ನು ಉತ್ತೇಜಿಸುತ್ತಿದ್ದವು ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಇನ್‌ಸ್ಟಾಗ್ರಾಂ ಪೇಜ್ ವಿರುದ್ಧ ಬರ್ಕೆ ಮತ್ತು ಮುಲ್ಕಿ ಪೊಲೀಸ್ ಠಾಣೆಗಳಲ್ಲಿ ಇಲ್ಲಿಯವರೆಗೆ ಮೂರು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳನ್ನು ಹೆಚ್ಚಿನ ತನಿಖೆಗಾಗಿ ಮಂಗಳೂರು ನಗರ ಸೈಬರ್ ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಈ ಪೇಜ್ ನ ಬಗ್ಗೆ ಮಾಹಿತಿ ನೀಡುವಂತೆ, ಸಂಬಂಧಪಟ್ಟ Law Enforcement Agency ರವರಿಗೆ ಪತ್ರ ವ್ಯವಹಾರ ನಡೆಸಲಾಗಿತ್ತು. ಅದರಂತೆ ಸಂಬಂಧಪಟ್ಟ Law Enforcement Agency ರವರು ‘beary_royal_nawab’ ಎಂಬ ಇನ್ ಸ್ಟಾ ಗ್ರಾಂ ಫೇಜ್ ನ್ನು ಭಾರತ ದೇಶದಲ್ಲಿ ಕಾರ್ಯ ನಿರ್ವಹಿಸದಂತೆ ರದ್ದುಗೊಳಿಸಲಾಗಿದೆ.

- Advertisement -


Must Read

Related Articles