ಮಂಗಳೂರು: ಎರಡು ದಿನದಲ್ಲಿ ಇಬ್ಬರನ್ನು ಬಲಿ ಪಡೆದ ಮಳೆ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನದಿಂದ ಭಾರಿ ಮಳೆಯಾಗುತ್ತಿದ್ದು, ಇಂದು ಕೂಡ ಮುಂದುವರೆದಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಇಂದು ರೆಡ್ ಅಲರ್ಟ್ ಘೋಷಿಸಿದೆ.

- Advertisement -


ಭಾರೀ ಮಳೆಗೆ ಮಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದಾರೆ.


ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಇದ್ದ ಭಾರಿ ಸುಂಟರಗಾಳಿಗೆ ವಿದ್ಯುತ್ ತಂತಿ ಕಡಿದು ಬಿದ್ದಿತ್ತು. ಆದರೆ ಈ ಬಗ್ಗೆ ಅರಿವಿಲ್ಲದೇ ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ತಂತಿ ಆಕಸ್ಮಿಕವಾಗಿತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

- Advertisement -


ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರಿನಲ್ಲಿ ಮನೆ ಸಂಪರ್ಕಿಸುವ ಮೋರಿ ದಾಟುವ ವೇಳೆ ಜಾರಿ ಬಿದ್ದು ಓರ್ವ ಸಾವನ್ನಪ್ಪಿದ್ದಾರೆ. ಮಂಗಳವಾರ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ನಿವಾಸಿ ಸುರೇಶ್ ಗಟ್ಟಿ (52) ಎಂಬವರು ನೀರಿಗೆ ಬಿದ್ದು ಮೃತಪಟ್ಟರು. ಸುರೇಶ್ ಗಟ್ಟಿ ಅವರು ವೃತ್ತಿಯಲ್ಲಿ ಪೈಂಟರ್ ಆಗಿದ್ದು, ಕೆಲಸ ಮುಗಿಸಿ ಸಂಜೆ ಮನೆಗೆ ಹೋಗಲು ಮೋರಿ ದಾಟುತ್ತಿದ್ದ ವೇಳೆ ಆಯತಪ್ಪಿ ಬಿದ್ದಿದ್ದಾರೆ.



Join Whatsapp