ಮಂಗಳೂರು: ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ

Prasthutha|

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಗಡಿಪಾರು ಮಾಡಲಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ನನ್ನು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

- Advertisement -


ಚುನಾವಣೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಿಂದ ಕೋಡಿಕೆರೆ ಲೋಕೇಶ್’ನನ್ನು ಗಡಿಪಾರು ಮಾಡಲಾಗಿತ್ತು. ಆದರೆ, ಆದೇಶ ಮೀರಿ ಈತ ಜಿಲ್ಲೆಯೊಳಗೆ ಪ್ರವೇಶಿಸಿದ್ದ. ಈ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಬಂಟ್ವಾಳದಲ್ಲಿ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆತನನ್ನು ಕಲಬುರಗಿಗೆ ಗಡಿಪಾರು ಮಾಡಲು ಮಂಗಳೂರು ಪೊಲೀಸರು ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.


ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸುವ ಸಾಧ್ಯತೆ ಇರುವುದರಿಂದ ಈತನನ್ನು ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಿ ಈತನ ಮೇಲೆ ನಿಗಾ ವಹಿಸಲಾಗುತ್ತಿತ್ತು. ಈತ ಗಡಿಪಾರು ಮಾಡಲಾದ ಶಿವಮೊಗ್ಗ ಜಿಲ್ಲೆಯಲ್ಲಿ ಇಲ್ಲದಿರುವುದು ಕಂಡು ಬಂದಿದ್ದು ಆತನ ಪತ್ತೆಗೆ ಪೊಲೀಸ್ ತಂಡ ರಚಿಸಲಾಗಿತ್ತು.