Home ಟಾಪ್ ಸುದ್ದಿಗಳು ಮಂಗಳೂರಿನಲ್ಲಿ ಸಲೂನ್ ಮೇಲೆ ದಾಳಿ ಕೇಸ್: ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ

ಮಂಗಳೂರಿನಲ್ಲಿ ಸಲೂನ್ ಮೇಲೆ ದಾಳಿ ಕೇಸ್: ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ

ಮಂಗಳೂರು: ನಗರದ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನಾ ಸಂಘಟನೆಯ 13 ಕಾರ್ಯಕರ್ತರು ಮತ್ತು ಒಬ್ಬ ಟಿವಿ ಕ್ಯಾಮರಾಮನ್ ಸೇರಿದಂತೆ ಒಟ್ಟು 14 ಮಂದಿಯನ್ನು ಮಂಗಳೂರು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.

ರಾಮಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ ಈ ಎಲ್ಲಾ ಆರೋಪಿಗಳನ್ನು ಬರ್ಕೆ ಪೊಲೀಸರು ಮಂಗಳೂರು ಜೆಎಂಎಫ್‌ಸಿ 6ನೇ ಕೋರ್ಟ್‌ಗೆ ಹಾಜರುಪಡಿಸಿದ್ದರು. ಕೋರ್ಟ್‌ ಫೆಬ್ರವರಿ 7 ರವರೆಗೆ ಈ ಎಲ್ಲರನ್ನು ನ್ಯಾಯಾಂಗ ಬಂಧನದಲ್ಲಿಡಲು ಆದೇಶಿಸಿದೆ.

ಜನವರಿ 23 ರಂದು 11 ಮಂದಿಯಿಂದ ಕೂಡಿದ ಗುಂಪು ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯ ಬಿಜೈ ಕೆಎಸ್‌ಆರ್‌ಟಿಸಿ ಬಳಿ ಇರುವ “ಕಲರ್ಸ್” ಎಂಬ ಯೂನಿಸೆಕ್ಸ್ ಪಾರ್ಲರ್‌ಗೆ ನುಗ್ಗಿ ದಾಂಧಲೆ ನಡೆಸಿತ್ತು. ಈ ಗುಂಪು ಪಾರ್ಲರ್‌ನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಮಹಿಳಾ ಸಿಬ್ಬಂದಿಯ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿತ್ತು. ಅಷ್ಟೇ ಅಲ್ಲದೆ ಪಾರ್ಲರ್‌ನ ಉಪಕರಣಗಳನ್ನು ಧ್ವಂಸಗೊಳಿಸಿ, ಉದ್ಯೋಗಿಗಳ ಮೇಲೆ ಹಲ್ಲೆ ನಡೆಸಿತ್ತು.

Join Whatsapp
Exit mobile version