ಮಂಗಳೂರು | ಅನೈತಿಕ ಪೊಲೀಸ್‌ಗಿರಿ ಪ್ರಕರಣ: ಸಂಘಪರಿವಾರದ ಕಾರ್ಯಕರ್ತನ ಬಂಧನ

Prasthutha|

ಮಂಗಳೂರು: ಅನೈತಿಕ ಪೊಲೀಸ್​ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಪರಿವಾರದ ಕಾರ್ಯಕರ್ತನೋರ್ವನನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

- Advertisement -

ಸುಳ್ಯ ಸೊಣಂಗೇರಿ ನಿವಾಸಿ ಪುನೀತ್​ ಬಂಧಿತ ಆರೋಪಿ. ಕೇರಳದ ಮಲಪ್ಪುರಂ ಮೂಲದ ಮೊಹಮ್ಮದ್ ಜಲೀಲ್ (39) ಎಂಬುವವರ ಮೇಲೆ ಹಲ್ಲೆ ನಡೆದಿದ್ದು, ಈ ಕುರಿತಾಗಿ ಸುಳ್ಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಹಮ್ಮದ್ ಜಲೀಲ್​ ಅವರು ಸುಳ್ಯದ ಅರಂತೋಡು ಎಂಬಲ್ಲಿ ಮೂರು ತಿಂಗಳ ಹಿಂದೆ ರಬ್ಬರ್ ತೋಟವನ್ನು ಗುತ್ತಿಗೆಗೆ ತೆಗೆದುಕೊಂಡು ಅಲ್ಲಿಯೇ ನೆಲೆಸಿದ್ದರು.

ಶನಿವಾರ ಅವರಿಗೆ ಪರಿಚಿತ ಮಹಿಳೆಯೊಬ್ಬರು ಮಡಿಕೇರಿಯಿಂದ ಸುಳ್ಯಕ್ಕೆ ಆಗಮಿಸುತ್ತಿದ್ದು, ವಿಶ್ರಾಂತಿ ಪಡೆಯಲು ರೂಂ ಬೇಕೆಂದು ಸಹಾಯ ಕೇಳಿದ್ದಾರೆ. ಸುಳ್ಯದಲ್ಲಿ ಮಹಿಳೆಗೆ ಕೊಠಡಿ ವ್ಯವಸ್ಥೆ ಮಾಡಿ, ತೊಡಿಕಾನಕ್ಕೆ ತೆರಳಿದ್ದಾಗ ಐದು ಜನರ ತಂಡವೊಂದು ಕಾರು ಹಾಗೂ ಸ್ಕೂಟರ್‌ನಲ್ಲಿ ಆಗಮಿಸಿದ್ದಾರೆ. ಮೊಹಮ್ಮದ್ ಜಲೀಲ್​ನನ್ನು ಅವಾಚ್ಯ ಪದಗಳಿಂದ ನಿಂದಿಸಿ, ಕೈಯಿಂದ ಹಲ್ಲೆ ಮಾಡುವುದರೊಂದಿಗೆ ಜೀವ ಬೆದರಿಕೆ ಹಾಕಿ ತೆರಳಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು.

- Advertisement -

ಐದು ಜನರ ಪೈಕಿ ಲತೀಶ್ ಗುಂಡ್ಯ, ವರ್ಷಿತ್ ಮತ್ತು ಪುನೀತ್ ಎಂಬ ಮೂವರ ಹೆಸರನ್ನು ಪ್ರಕರಣದಲ್ಲಿ ದಾಖಲಿಸಲಾಗಿದೆ. ದೂರಿನ ಆಧಾರದ ಮೇಲೆ ಸುಳ್ಯ ಪೊಲೀಸರು ಐಪಿಸಿ ಸೆಕ್ಷನ್ 143, 147, 341, 323, 504, 153 (ಎ) ಮತ್ತು 149 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



Join Whatsapp