ಮಂಗಳೂರು: ಅಂಬೇಡ್ಕರ್ ಜಯಂತಿ ಪ್ರಯುಕ್ತ SDPIಯಿಂದ ‘ಸಾಮಾಜಿಕ ನ್ಯಾಯ ದಿನಾಚರಣೆ’

- Advertisement -

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ ” ಸರ್ವಾಧಿಕಾರ ಅಳಿಯಲಿ ಸಂವಿಧಾನ ಉಳಿಯಲಿ ” ಎಂಬ ಘೋಷ ವಾಕ್ಯದೊಂದಿಗೆ ಡಾ. ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿಯ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ ಯನ್ನು ಎಸ್.ಡಿ.ಪಿ.ಐ ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ ರವರ ನೇತೃತ್ವದಲ್ಲಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.

- Advertisement -

ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಎಸ್ ಡಿ ಪಿ ಐ ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ, ಅಂಬೇಡ್ಕರ್ ರವರು ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಅಪಾರವಾದ ಕೊಡುಗೆ ನೀಡಿದ್ದಾರೆ ಹಾಗೂ ಭಾರತದ ಸಾಮಾಜಿಕ ಕ್ರಾಂತಿಯಲ್ಲಿ ಅಂಬೇಡ್ಕರ್ ರವರ ಪಾತ್ರದ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾನಾಡಿದ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಎಂ ದೇವದಾಸ್ ರವರು, ಅಂಬೇಡ್ಕರ್ ಜೀವನ ಹಾಗೂ ಸಂವಿಧಾನ ರಚನೆಯಲ್ಲಿ ಅವರ ಪಾತ್ರವನ್ನು ವಿವರಿಸಿ ಬಾಬಾ ಸಾಹೇಬರ ಕೊಡುಗೆಗಳ ಬಗ್ಗೆ ಬೆಳಕು ಚೆಲ್ಲಿದರು

- Advertisement -

ಎಸ್ ಡಿ ಪಿ ಐ ಜಿಲ್ಲಾ ಉಪಾಧ್ಯಕ್ಷೆ ಆಯಿಷಾ ಬಜ್ಪೆ ಮಾತಾನಾಡಿ, ಅಂಬೇಡ್ಕರ್ ರವರು ಕಾನೂನು ಸುವ್ಯವಸ್ಥೆ, ಅಸ್ಪ್ರಶ್ಯತೆ ನಿವಾರಣೆ, ಸಮಾನತೆಯ ಮೂಲಕ ದೇಶದಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿದ ಮಾಹಾನ್ ವ್ಯಕ್ತಿಯಾಗಿದ್ದಾರೆ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಪಿ ಐ ಮಂಗಳೂರು ನಗರ ಜಿಲ್ಲಾಧ್ಯಕ್ಷ್ಯಅಬ್ದುಲ್ ಜಲೀಲ್ ಕೆ ಮಾತನಾಡಿ,   ಪ್ರಜಾಪ್ರಭುತ್ವ, ನ್ಯಾಯ ಮತ್ತು ಮಾನವ ಹಕ್ಕುಗಳ ನಿರ್ಭೀತಿಯ ಧ್ವನಿ, ಸಾಮಾಜಿಕ ಪ್ರಜಾಪ್ರಭುತ್ವದ ಅಡಿಪಾಯದ ಮೇಲೆ ನಿಂತಿಲ್ಲದಿದ್ದರೆ ರಾಜಕೀಯ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ನಮಗೆ ಎಚ್ಚರಿಸಿದ್ದರು. ಸರ್ವಾಧಿಕಾರ ಯಾವುದೇ ರೂಪದಲ್ಲಿ, ಯಾವುದೇ ಹೆಸರಿನಲ್ಲಿ ನಮ್ಮ ಸ್ವಾತಂತ್ರ್ಯವನ್ನು ಕಸಿಯಲು ಬಯಸಿದರೆ ಅದರ ವಿರುದ್ಧ ಭಯದಿಂದಲ್ಲ, ಧೈರ್ಯದಿಂದ ಎದುರಿಸೋಣ. ಸ್ವಾತಂತ್ರ್ಯದ ಜ್ವಾಲೆಯನ್ನು ನಂದಿಸಲು ಅವಕಾಶ ನೀಡದಿರೋಣ ಎಂದು ಆತ್ಮಸ್ಥೈರ್ಯ ತುಂಬಿದರು.

ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ  ದಲಿತ  ಸಂಘರ್ಷ ಸಮಿತಿಯ ಮುಖಂಡರಾದ ಎಂ  ದೇವದಾಸರವರನ್ನು ಸನ್ಮಾನಿಸಲಾಯಿತು. ಎಸ್ ಡಿ ಪಿ ಐ  ಉಪಾಧ್ಯಕ್ಷರಾದ ಅಶ್ರಪ್ ಅಡ್ಡೂರು, ಪ್ರಧಾನ ಕಾರ್ಯದರ್ಶಿ  ಜಮಾಲ್ ಜೋಕಟ್ಟೆ  ಉಪಸ್ಥಿತರಿದ್ದರು. ಜಮಾಲ್ ಜೋಕಟ್ಟೆ ಸ್ವಾಗತಿಸಿದರು ಸುಹೈಲ್ ಖಾನ್  ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದಗೈದರು

- Advertisement -


Must Read

Related Articles